ಉದ್ಯಮಿ ಸಿ.ಜೆ.ರಾಯ್ ‘ಕಾನ್ಪಿಡೆಂಟ್’ ಕಳೆದುಕೊಂಡಿದ್ದು ಯಾಕೆ..?
ಬೆಂಗಳೂರು: ಕಂಪನಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಸಂದರ್ಭದಲ್ಲೇ ಪಿಸ್ತೂಲ್ನಿಂದ ಎದೆಗೆ ಗುಂಡುಹಾರಿಸಿಕೊಂಡು ಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಕಂಪನಿ ಮುಖ್ಯಸ್ಥ ಡಾ.ಸಿ.ಜೆ.ರಾಯ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಿಚ್ಮಡ್ ಟೌನ್ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ನ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪಿಸ್ತೂಲ್ನಿಂದ ರಾಯ್ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ರಾಯ್, ಬೆಂಗಳೂರು, ಕೇರಳ, ತಮಿಳುನಾಡು ಸೇರಿದಂತೆ ದೇಶ-ವಿದೇಶಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿದ್ದರು. ಆದಾಯ ತೆರಿಗೆ ಅಧಿಕಾರಿಗಳು 2 ತಿಂಗಳಿಂದ ರಾಯ್ ಕುರಿತು ತನಿಖೆ ನಡೆಸಿದ್ದರು. ಕಳೆದ 3 ದಿನಗಳಿಂದ ಬೆಂಗಳೂರಿನ ಕಚೇರಿ ಮೇಲೆ ದಾಳಿ ನಡೆದಿತ್ತು. ಈ ವೇಳೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿವಿ ರಿಯಾಲಿಟಿ ಶೋಗಳ ವಿಜೇತರಿಗೆ ಬಹುಮಾನ ನೀಡುವ ಮೂಲಕ ರಾಯ್ ಜನರಿಗೆ ಚಿರಪರಿಚಿತರಾಗಿದ್ದರು. ಪೊಲೀಸ್ ತನಿಖೆಯಿಂದ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ.

